ರೈತರ ಜೀವನಾಡಿಯಾದ ಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ತುಂಬಿದ ಭದ್ರೆಗೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ಬಾಗಿನ ಸಮರ್ಪಣೆ ಮಾಡಲಾಯಿತು. ಈ ವೇಳೆ ಮಾತನಾಡಿದ ರೈತ ಸಘದ ರಾಜ್ಯಾಧ್ಯಕ್ಷ ಬಸವರಾಜಪ್ಪ, ಈ ವರ್ಷ ಉತ್ತಮ ಮಳೆಯಾಗಿ ಅಣೆಕಟ್ಟು ತುಂಬಿ ನದಿಗೆ ನೀರು ಬಿಡಲಾಗಿದೆ. ಅಚ್ಚುಕಟ್ಟು ಪ್ರದೇಶದಲ್ಲಿ 2 1/2ಲಕ್ಷ ಎಕರೆ ಪ್ರದೇಶದಲ್ಲಿ ರೈತರು ಅಡಿಕೆ, ತೆಂಗು, ಭತ್ತ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಜನ-ಜಾನುವಾರುಗಳಿಗೆ, ಕುಡಿಯುವ ನೀರಿನ ಸಮಸ್ಯೆ ಸಹ ನೀಗಿದೆ. ಈ ವರ್ಷವೂ ಸಹ ಬೇಸಿಗೆ ಬೆಳೆ ಬೆಳೆಯಲು ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದರು