ಕಾರ್ಮಿಕ ಇಲಾಖೆಯಲ್ಲಿ ವಿವಾಹ ಸಹಾಯಧನ ನೀಡುವಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆದಿದ್ದು, ಅಧಿಕಾರಿಗಳು ಸೂಕ್ತ ಮಾಹಿತಿ ಕೊಡುತ್ತಿಲ್ಲ ಎಂದು ಶಿವಮೊಗ್ಗ ಜಿಲ್ಲಾ ರೈತ ಸಂಘದ ಕಾರ್ಯದರ್ಶಿ ಹಾಗೂ ಶ್ರಮಜೀವಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಸತೀಶ್ ಎ.ಎಂ.ಅಂಗಡಿ ಆರೋಪಿದ್ದಾರೆ ಸಾಗರ ನಗರದಲ್ಲಿ ಮಂಗಳವಾರ ಸಂಜೆ 6 ಗಂಟೆಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2022 ಜನವರಿಯಿಂದ 2023 ಜೂನ್ ತಿಂಗಳವರೆಗೆ ಕಾರ್ಮಿಕ ಇಲಾಖೆಯಿಂದ ವಿವಾಹಕ್ಕೆ ಮಂಜೂರಾದ ಹಣದಲ್ಲಿ ಡೊಡಮಟ್ಟದ ಅವ್ಯವಹಾರ ನಡೆದಿದೆ. ಅಧಿಕಾರಿಗಳು ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸದರೆ ಸೂಕ್ತ ಮಾಹಿತಿಯನ್ನೆ ನೀಡಿಲ್ಲ. ಅಧಿಕಾರಿಗಳು ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸಹಾಯಕ ಕಾರ್ಮಿಕ ಆಯುಕ್ತರಿಗೆ ಪತ್ರ ಬರೆಯಲಾಗಿತ್ತು.