ಮೈಸೂರು:ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು. ಶಿವನ ಕಪಾಲಿ ಬೆಟ್ಟವನ್ನೆ ಏಸು ಬೆಟ್ಟ ಮಾಡಲು ಹೊರಟ ಡಿಕೆ ಶಿವಕುಮಾರ್ ರಿಂದ ನಮಗೆ ಧರ್ಮ ದ ಪಾಠ ಬೇಡ. ಅನ್ಯ ಧರ್ಮದವರನ್ನು ಬರೀ ಓಲೈಕೆಗಾಗಿ ಬ್ರದರ್ಸ್ ಎಂದು ಕರೆಯುವ ಡಿಕೆ ಶಿವಕುಮಾರ್ ನಮಗೆ ಧರ್ಮ ದ ಬಗ್ಗೆ ತಿಳುವಳಿಕೆ ಹೇಳುವುದು ಬೇಡ. ಸಿದ್ದರಾಮಯ್ಯ ತಂತ್ರ ಕಾಂಗ್ರೆಸ್ ಮೂರ್ಖರಿಗೆ ಅರ್ಥ ವಾಗುತ್ತಿಲ್ಲ. ಮುಸ್ಲಿಂ ರನ್ನು ತಮ್ಮ ಬೆನ್ನ ಹಿಂದೆ ಇಟ್ಟು ಕೊಳ್ಳಲು ಸಿದ್ದರಾಮಯ್ಯ ಬಾನು ಮುಷ್ತಾಕ್ ರನ್ನು ದಸರಾ ಉದ್ಘಾಟನೆ ಗೆ ಕರೆದಿದ್ದಾರೆ. ನಾಳೆ ಸಿಎಂ ಕುರ್ಚಿಗೆ ಕಂಟಕ ಬಂದಾಗ ಮುಸ್ಲಿಂ ಶಕ್ತಿ ತಮ್ಮ ಹಿಂದೆ ನಿಲ್ಲಿಸಿ ಕೊಳ್ಳಲು ಸಿದ್ದರಾಮಯ್ಯ ಎಣೆದಿರುವ ತಂತ್ರ ಇದು ಎಂದು ವಾಗ್ದಾಳಿ.