ಸೆಪ್ಟಂಬರ್ 10, ಬುಧವಾರ ಸಂಜೆ 6 ಗಂಟೆಗೆ ಕಂಪ್ಲಿ ಪಟ್ಟಣದ 5ನೇ ವಾರ್ಡ್‌ನಲ್ಲಿ ಫಲಾನುಭಾವಿಗಳಿಗೆ ಅಧಿಕೃತವಾಗಿ ಹಕ್ಕು ಪತ್ರಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ಗಣೇಶ್ ಅವರು ಫಲಾನುಭಾವಿಗಳಿಗೆ ಹಕ್ಕು ಪತ್ರಗಳನ್ನು ಹಸ್ತಾಂತರಿಸಿ ಮಾತನಾಡಿ, ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳಿಂದ ಹೆಚ್ಚಿನವರು ಲಾಭ ಪಡೆಯುವಂತೆ ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಮುಖ್ಯಾಧಿಕಾರಿ ಮಲ್ಲಿಕಾರ್ಜುನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಪುರಸಭೆ ಸದಸ್ಯ ರಾಘು, ಎಪಿಎಂಸಿ ಅಧ್ಯಕ್ಷ ಹಬೀಬ್ ಸೇರಿದಂತೆ ಹಲವರು ಉಪಸ್ಥಿತರಿದ್ದರು