ಭದ್ರಾವತಿಯ ರಬ್ಬರ್ ಕಾಡು ಗ್ರಾಮದ ಗಣಪತಿ ವಿಸರ್ಜನೆ ವೇಳೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಅವರ ಪತ್ನಿಯ ಮೇಲೆ ಯುವಕರ ಗುಂಪು ಹಲ್ಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ ಕನಕ ಯುವಕರ ಸಂಘದ ವತಿಯಿಂದ ಭಾನುವಾರ ಗಣಪತಿ ವಿಸರ್ಜನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಹಳೆ ವೈಷಮ್ಯದ ಹಿನ್ನೆಲೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಕೃಷ್ಣೆಗೌಡ ಹಾಗೂ ಅವರ ಪತ್ನಿ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿದ್ದಲ್ಲದೆ ಬಿಡಿಸಲು ಹೋದ ಎಎಸ್ಐ ಯಲ್ಲಪ್ಪ ಅವರ ಮೇಲು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಭದ್ರಾವತಿ ಪೇಪರ್ ಟೋನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.