ಮಂಡ್ಯ ತಾಲ್ಲೂಕಿನ ಹೊಸಬೂದನೂರು ಗ್ರಾಮದಲ್ಲಿ ಶ್ರೀ ಅನಂತ ಪದ್ಮನಾಭ ಸ್ವಾಮಿಯ ಜನ್ಮದಿನಾಚರಣೆ ಕಾರ್ಯಕ್ರಮ ಶನಿವಾರ ಮಧ್ಯಾಹ್ನ ನಡೆಯಿತು. ಹೊಯ್ಸಳರ ಕಾಲದಲ್ಲಿ ನಿರ್ಮಾಣವಾಗಿರುವ ಶ್ರೀ ಅನಂತಪದ್ಮನಾಭಸ್ವಾಮಿ ದೇವಾಲಯವು 800 ವರ್ಷಗಳ ಇತಿಹಾಸ ಹೊಂದಿದೆ. ಅನಂತ ಚತುರ್ದಶಿ ಇರುವ ಕಾರಣ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಶ್ರೀ ಅನಂತ ಚತುರ್ದಶಿ ಅಂಗವಾಗಿ ಶ್ರೀ ಅನಂತ ಪದ್ಮನಾಭ ಸ್ವಾಮಿಗೆ ವಿಶೇಷ ಅಲಂಕಾರ, ಹೋಮ-ಹವನ ನಡೆಯಿತು. ಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಮುಖಂಡರಾದ ಕುಮಾರ್, ಚಂದ್ರಣ್ಣ, ರಾಮರಾಜು, ರಘು, ಶೇಖರ್, ಮಂಜು ಗೌಡ ಸೇರಿದಂತೆ ಹಲವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.