ರಾಯಚೂರು ಜಿಲ್ಲೆಯ ಲಿಂಗಸೂಗೂರ ತಾಲೂಕಿನ ಅಮರೇಶ್ವರ ಸುಕ್ಷೇತ್ರದಲ್ಲಿನ ವಾಣಿಜ್ಯ ಮಳಿಗೆಗಳನ್ನು ಹರಾಜು ನಡೆಸುವಂತೆ ಆಗ್ರಹಿಸಿ ಲಿಂಗಸುಗೂರ ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಮುಂದೆ ಶುಕ್ರವಾರ ಮಧ್ಯಾನ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ತಾಲೂಕ ಘಟಕದಿಂದ ಪ್ರತಿಭಟನೆ ನಡೆಸಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಮುಖಂಡರು ಮಾತನಾಡಿ, ಕಳೆದ 20 ವರ್ಷಗಳಿಂದ ವಾಣಿಜ್ಯ ಮಳಿಗೆಗಳ ಬಾಡಿಗೆ ಹರಾಜು ನಡೆದಿಲ್ಲ ಅಲಿ ಮಳಿಗೆ ಪಡೆದವರು ಮನೆಯನ್ನು ನಿರ್ಮಿಸಿಕೊಂಡಿದ್ದಾರೆ ನಿಯಮದಂತೆ ಮೂರು ವರ್ಷಕ್ಕೊಮ್ಮೆ ಟೆಂಡರ್ ಮಾಡಬೇಕು ಇದುವರೆಗೂ ನಡೆದಿಲ್ಲ ಕೂಡಲೇ ಟೆಂಡರ್ ನಡೆಸಿ ಮಳಿಗೆಗಳ ಹರಾಜು ಮಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕ ಅಧ್ಯಕ್ಷರು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.