ಬಳ್ಳಾರಿಯಲ್ಲಿ ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸಿರ್ ಹುಸೇನ್ ಅವರ 55ನೇ ಹುಟ್ಟುಹಬ್ಬದ ಅಂಗವಾಗಿ, ಅವರ ಬೆಂಬಲಿಗರು, ಕಾಂಗ್ರೆಸ್ ಶಾಸಕರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಮಹಾನಗರ ಪಾಲಿಕೆಯ ಅನುಮತಿ ಇಲ್ಲದೆ ಮೋತಿ ವೃತ್ತ, ಮೊದಲನೇ ರೈಲ್ವೆ ಗೇಟ್, ಕೌಲ ಬಜಾರ್, ಬಂಡಿಹಟ್ಟಿ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಬ್ಯಾನರ್‌ಗಳನ್ನು ಅಳವಡಿಸಿದ್ದರು. ಈ ಅಕ್ರಮವನ್ನು ಗಮನಿಸಿದರೂ, ಮಹಾನಗರ ಪಾಲಿಕೆಯ ಆಯುಕ್ತರು ಮತ್ತು ಪರಿಸರ ಅಭಿಯಂತರರು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಿಜೆಪಿ ಮುಖಂಡರ ಆರೋಪ