ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಅಕ್ಕ ಕೆಫೆಯನ್ನ ಇಂಧನ ಇಲಾಖೆ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಉದ್ಘಾಟನೆ ಮಾಡಿದರು. ಜಿಲ್ಲಾ ಪಂಚಾಯಿತಿಯಲ್ಲಿ ಇರುವ ಅಧಿಕಾರಿಗಳು ಸಿಬ್ಬಂದಿಗಳು ಮತ್ತು ಕಚೇರಿಗೆ ಬರುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಒಂದು ಕೆಫೆಯನ್ನ ಆರಂಭಿಸಲಾಗಿದ್ದು ಸಚಿವ ಜಾರ್ಜ್ ಶುಕ್ರವಾರ ಉದ್ಘಾಟನೆ ಮಾಡಿದರು.