ವಿಜಯಪುರದಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸರ ನೇಮಕ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಕಳೆದ ಕೆಲ ತಿಂಗಳಿನಿಂದ ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲ. ಉಪನ್ಯಾಸಕರೇ ಇಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸರ್ಕಾರ ಆದಷ್ಟು ಬೇಗನೆ ಅತಿಥಿ ಉಪನ್ಯಾಸಕರ ನೇಮಕ ಮಾಡಬೇಕೆಂದರು