ಶಿವಮೊಗ್ಗ ನಗರದ ಇತಿಹಾಸ ಪ್ರಸಿದ್ಧ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ಪ್ರಾರಂಭವಾಗಿದೆ ಶಿವಮೊಗ್ಗ ನಗರದ ಕೋಟೆ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ಹಿನ್ನೆಲೆ ಶಿವಮೊಗ್ಗ ನಗರ ಸಂಪೂರ್ಣ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಶನಿವಾರ ರಾಜಬೀದಿ ಉತ್ಸವ ಪ್ರಾರಂಭವಾಗಿದ್ದು, ರಾಜಬೀದಿ ಉತ್ಸವದಲ್ಲಿ ಶಾಸಕ ಚನ್ನಬಸಪ್ಪ ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದ್ದಾರೆ.