ಬೆಂಗಳೂರು ಉತ್ತರ ನಗರ ಪಾಲಿಕೆ ದಾಸರಹಳ್ಳಿಯ ಭೈರವವೇಶ್ವರ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ಗೋಡೌನ್‌ಗೆ ಸೋಮವಾರ ಎ.ಜಿ.ಎಂ ಪವನಾ ನೇತೃತ್ವದ ತಂಡವು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಏಕ ಬಳಕೆಯ 3.5 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 1.5 ಲಕ್ಷ ರೂ. ದಂಡ ವಿಧಿಸಲಾಗಿದೆ. ಮತ್ತೆ ಇದೇ ಮರುಕಳಿಸಿದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ದಾಳಿ ವೇಳೆ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್, ಕಾರ್ಯಪಾಲಕ ಅಭಿಯಂತರರಾದ ಸುಧಾಕರ್, ನಾಗಪ್ಪ ಸೇರಿದಂತೆ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು ಇದ್ದರು.