ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮವಾಗಿ ಸ್ವೀಕರಿಸಿ. ಇಂದಿನ ಸೋಲೆ ಮುಂದಿನ ಗೆಲುವಿಗೆ ಮಟ್ಟಿಲು ಎಂದು ಕಾಳಿ ಬೀರೇಶ್ವರ ಟ್ರಸ್ಟಿನ ಅಧ್ಯಕ್ಷ ಬಿ ನಾಗರಾಜು ಕ್ರೀಡಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮೈಸೂರು ತಾಲೂಕಿನ ಕಡಕೊಳದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಾಲ್ಕು ಹೋಬಳಿಯ ಶಾಲೆಗಳ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಭಾಗವಹಿಸಿದ್ದು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮ ಪ್ರತಿಭೆಯನ್ನು ತೋರಿಸಿ ಸೋಲು ಗೆಲುವನ್ನು ಸಮವಾಗಿ ಸ್ವೀಕರಿಸಿ ಇಂದಿನ ಸೋಲೆ ಮುಂದಿನ ಗೆಲುವಾಗಿಸಿಕೊಳ್ಳಲು ಯತ್ನಿಸಬೇಕು ಎಂದು ಹೇಳಿದರು.