ನಂಜನಗೂಡಿನಲ್ಲಿ ಆಗಸ್ಟ್ ,31ರಂದು ಜಿಲ್ಲಾಡಳಿತ ಹಮ್ಮಿಕೊಂಡಿರುವ ಭಗೀರಥ ಜಯಂತೋತ್ಸವ ಹಾಗೂ ಉಪ್ಪಾರ ಸಮುದಾಯ ಭವನದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಳ್ಳುತ್ತಿದ್ದು, ಶಾಸಕ ದರ್ಶನ್ ಧ್ರುವನಾರಾಯಣ್ ಇಂದು ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದರು. ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದ ಬಳಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಪಕ್ಷತೀತವಾಗಿ ಆಯೋಜನೆ ಮಾಡಲಾಗಿದ್ದು, ಎಲ್ಲರನ್ನು ಆಹ್ವಾನಿಸುತ್ತೇವೆ. ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಉಪ್ಪಾರ ಸಮುದಾಯ ಭವನವನ್ನು ನಿರ್ಮಾಣ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ.