ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಸಮಾಜಕ್ಕೆ ದೊಡ್ಡ ಕೊಡುಗೆ ನೀಡುವ ಚಿಂತನೆ ವಿದ್ಯಾರ್ಥಿಗಳಲ್ಲಿ ಮೂಡಬೇಕಿದೆ ಎಂದು ಕಡೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ ಎಸ್ ಆನಂದ್ ಕರೆಕೊಟ್ಟರು. ಕಡೂರು ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ತಾಲೂಕು ಕನಕ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಮಾಜದ ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.