ಪ್ರಶ್ನೆ ಮಾಡುವ ಮನೋಭಾವನೆ ಬೆಳೆಸಿಕೊಂಡಾಗ ಮಾತ್ರ ಬದಲಾವಣೆ ಸಾಧ್ಯ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಅಭಿಪ್ರಾಯ ಪಟ್ಟರು. ತಾಲೂಕಿನ ಹಿರೇಬೇಗೂರು ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕವನ್ನು ಭಾನುವಾರ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮಿಂದ ಆಯ್ಕೆಯಾದವರನ್ನು ಮೊದಲು ಪ್ರಶ್ನೆ ಮಾಡಬೇಕು. ಕೆಲ ಅವೈಜ್ಞಾನಿಕ ನಿರ್ಧಾರಗಳ ವಿರುದ್ಧ ಬೀದಿಗಳಿದು ಹೋರಾಟ ಮಾಡಿದರೆ ಮಾತ್ರ ನ್ಯಾಯ ಸಿಗುತ್ತದೆ ಎಂದು ತಿಳಿಸಿದರು. ಈ ವೇಳೆ ಮಧು ಚೇರ್ಮನ್ ಮಾತನಾಡಿ, ಸುಮಾರು 20 ವರ್ಷಗಳ ಕನಸು ಇಂದು ನನಸಾಗಿದೆ, ರೈತರು ಸಂಘಟಿತರಾಗುವುದು ಅವಶ್ಯವಾಗಿದೆ ಎಂದರು.