ಒಣ ತ್ಯಾಜ್ಯ ಘಟಕದಲ್ಲಿ ತ್ಯಾಜ್ಯ ನಿರ್ವಹಣೆ ಕಾರ್ಯವನ್ನು ಒಪ್ಪಂದದ ಪ್ರಕಾರ ಸಮರ್ಪಕವಾಗಿ ನಿರ್ವಹಿಸಲು ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರು ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಪಾಲಿಕೆಯ ವ್ಯಾಪ್ತಿಯ ರಾಧಾಕೃಷ್ಣ ದೇವಸ್ಥಾನ ವಾರ್ಡ್ ನ ವಿವಿಧ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಆಯುಕ್ತರು, ಪಾಲಿಕೆಯ ವ್ಯಾಪ್ತಿಯಲ್ಲಿ ಒಣ ತ್ಯಾಜ್ಯ ಸಂಗ್ರಹಣಾ ಘಟಕದ ಕಾರ್ಯ ವೈಖರಿಯ ಮಾಹಿತಿ ಸಂಗ್ರಹಿಸಿ ನೀಡಲು ಸಂಬಂಧಪಟ್ಟ ಅಭಿಯಂತರರಿಗೆ ಸೂಚನೆ ನೀಡಿದರು.