ಭಟ್ಕಳ ತಾಲೂಕಿನ ಮುರುಡೇಶ್ವರ ಸಮೀಪದ ನೇತ್ರಾಣಿ ದ್ವೀಪದ ಬಳಿಪರ್ಷಿಯನ್ ಬೋಟ್ ಮುಳುಗಡೆಯಾಗಿದ್ದು, ಅದೃಷ್ಟವಶಾತ್ ಬೋಟ್ನಲ್ಲಿದ್ದ 25 ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿರುವ ಬಗ್ಗೆ ಸೋಮವಾರ ಸಂಜೆ 6.30ಕ್ಕೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಈ ಬೋಟ್ ಮುಳುಗಡೆಯಾಗಿದೆ. ಸಮೀಪದಲ್ಲಿದ್ದ ಮೀನುಗಾರಿಕಾ ಬೋಟಿಯವರು ರಕ್ಷಣೆ ಮಾಡಿದ್ದಾರೆ. ಈ ದುರಂತದಿಂದ ಅಂದಾಜು 80 ಲಕ್ಷ ರೂ.ಗಳಿಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.