ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾವಿನ ಕೋಟೆ, ಸಾಸ್ವೆಹಳ್ಳಿ ಗ್ರಾಮದಲ್ಲಿ ಓರ್ವ ವೃದ್ಧ ಹಾಗೂ ನಾಲ್ವರು ಮಕ್ಕಳು ಸೇರಿದಂತೆ ಐವರ ಮೇಲೆ ಭಾನುವಾರ ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಬೀದಿ ನಾಯಿಗಳು ಮಾರಣಾಂತಿಕ ದಾಳಿ ನಡೆಸಿವೆ. ಮಾವಿನಕೋಟೆ ಗ್ರಾಮದ ವೃದ್ಧ ಮೂರು ಮಕ್ಕಳು, ಹಾಗೂ ಸಾಸ್ವೆಹಳ್ಳಿಯ ಓರ್ವ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಗಾಯಾಳುಗಳಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು ಜನ ಪರದಾಡುವಂತಾಗಿದೆ. ಗ್ರಾಮದಲ್ಲಿ ಬೀದಿ ನಾಯಿಗಳ ಸಂಖ್ಯೆ ಮೀತಿಮೀರಿದೆ, ಇಷ್ಟಾದರೂ ಗ್ರಾಮ ಪಂಚಾಯತಿ ಅಧಿಕಾರಿಗಳು, ಸದಸ್ಯರು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.