Download Now Banner

This browser does not support the video element.

ಸೂಪಾ: ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಸಂಪನ್ನಗೊಂಡ ಪಿಂಚಣಿ ಅದಾಲತ್

Supa, Uttara Kannada | Sep 12, 2025
ಜೋಯಿಡಾ : ತಾಲೂಕಾ ಆಡಳಿತ ಸೌಧದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮವು ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಪನ್ನಗೊಂಡಿತು. ಜೋಯಿಡಾ ತಾಲೂಕಾ ವ್ಯಾಪ್ತಿಯಲ್ಲಿ ಒಳಪಡುವ ವಿಧವಾ, ಅಂಗವಿಕಲ, ಸಂಧ್ಯಾ ಸುರಕ್ಷಾ,ಇಂದಿರಾ ಗಾಂಧಿ ವಿಕಲಚೇತನ ವೇತನ, ಮನಸ್ಸಿನಿ ಯೋಜನೆ ಸೇರಿದಂತೆ ವಿವಿಧ ಪಿಂಚಣಿ ಯೋಜನೆಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು, ಇ-ಕೆವೈಸಿ ಪ್ರಕ್ರಿಯೆಯಲ್ಲಿ ಉಂಟಾಗಿರುವ ತೊಂದರೆಗಳು ಹಾಗೂ ಇತರೆ ದಾಖಲೆಗಳಿಂದ ಸ್ಥಗಿತಗೊಂಡಿರುವ ಪಿಂಚಣಿ ಫಲಾನುಭವಿಗಳ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆರ್.ವಿ.ದೇಶಪಾಂಡೆಯವರು ಸೂಚನೆಯನ್ನು ನೀಡಿದರು.
Read More News
T & CPrivacy PolicyContact Us