ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಸಾಯಂಕಾಲ 4ಗಂಟೆ ಸುಮಾರಿಗೆ ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಜರಗಿತು. ಬಸವನ ಬಾಗೇವಾಡಿ ನಿಡಗುಂದಿ ಹಾಗೂ ಕೊಲ್ಹಾರ ತಾಲೂಕಿನ ಮೂಲಭೂತ ಸೌಕರ್ಯಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು. ಇನ್ನು ಅಧಿಕಾರಿಗಳು ಸಮಗ್ರ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಮೂರು ತಾಲೂಕಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗಿಯಾಗಿದ್ದರು.