ಪಟ್ಟಣದ ಕಾವೇರಿ ನದಿ ತಟದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಪರಿಶೀಲಿಸಿದರು. ದೇವಾಲಯ ಜೀರ್ಣೋದ್ದಾರಕ್ಕೆ ಸಹಕಾರ ನೀಡುವಂತೆ ದೇವಾಲಯ ಸಮಿತಿಯಿಂದ ಸಂಸದರಿಗೆ ಮನವಿ ಸಲ್ಲಿಸಲಾಯಿತು.ಈ ಸಂಬಂಧ ಮಾತನಾಡಿದ ಸಂಸದರಾದ ಯದುವೀರ್, ಪಕ್ಷದ ವರಿಷ್ಠರೊಂದಿಗೆ ಹಾಗೂ ದೇವಾಲಯ ಸಮಿತಿಯವರೊಂದಿಗೆ ಚರ್ಚಿಸಿ ಅಗತ್ಯ ಅನುದಾನ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.ಧರ್ಮಸ್ಥಳ ಪ್ರಕರಣದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕ್ಷೇತ್ರದ ಬಗ್ಗೆ ಸಾಮಾಜಿಕ ಜಾಲತಾಣ, ಯೂಟ್ಯೂಬ್ ಗಳಲ್ಲಿ ಬಹಳ ಅಪಪ್ರಚಾರ ನಡೆಯುತ್ತಿದೆ. ಧರ್ಮಾಧಿಕಾರಿಯವರು ಅತ್ಯಂತ ಗೌರವಯುತ ಸ್ಥಾನದಲ್ಲಿರುವವರು. ಘಟನೆಯಿಂದ ಭಕ್ತರಿಗೆ ಅತೀ