ಬಾಗಲಕೋಟ ಜಿಲ್ಲೆಯ ಇಳಕಲ್ ನಗರದ ವಿವಿಧಡೆ ಸಿಸಿ ರಸ್ತೆಗೆ ಸಮಾಜ ಕಲ್ಯಾಣ ಇಲಾಖೆ ಬಾಗಲಕೋಟೆ ೨೦೨೪ ೨೫ನೇ ಸಾಲಿನಲ್ಲಿ ಪ್ರಗತಿ ಕಾಲೋನಿ ಯೋಜನೆ ಹುನಗುಂದ ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲಭೂತ ಕಾಮಗಾರಿಗಳ ಯೋಜನೆಯಲ್ಲಿ ಇಲಕಲ್ ನಗರದ ವಾರ್ಡ ನಂಬರ್ ೨, ವಾರ್ಡ್ ನಂಬರ್ ೫ ವಾರ್ಡ್ ನಂಬರ್ ೨೭ರಲ್ಲಿ ಸುಮಾರು ೫೦ ಲಕ್ಷದ ಸಿಸಿ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಶಾಸಕ ವಿಜಯಾನಂದ ಕಾಶಪ್ಪನವರ ಸೆ.೨೪ ಸಾಯಂಕಾಲ ೪ ಗಂಟೆಗೆ ನೆರವೇರಿಸಿದರು. ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರು ಸರ್ವ ಸದಸ್ಯರು, ಇಲಾಖೆಯ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ವಿವಿಧ ವಾರ್ಡಿನ, ಸಾರ್ವಜನಿಕರು ಉಪಸ್ಥಿತರಿದ್ದರು.