ಪರಿಶಿಷ್ಟ ಪಂಗಡಕ್ಕೆ ಬೇರೆ ಸಮುದಾಯಗಳನ್ನು ಸೇರ್ಪಡೆ ಮಾಡಬಾರದು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದಿಂದ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಗುರುವಾರ ಮಧ್ಯಾಹ್ನ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರರ ಸಂಖ್ಯೆಯ ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇರೆ ಸಮುದಾಯಗಳಿಗೆ ಸರ್ಕಾರ ಯಾವುದೇ ಸೌಲಭ್ಯ ನೀಡಲು ನಮ್ಮ ಅಭ್ಯಂತರವಿಲ್ಲ ಆದರೆ ಪರಿಶಿಷ್ಟ ಪಂಗಡಕ್ಕೆ ಬೇರೆ ಸಮುದಾಯಗಳನ್ನು ಸೇರ್ಪಡೆಗೊಳಿಸಿದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.