ಎಥೆನಾಲ್ ಕಂಪನಿ ವಿರುದ್ಧ ಸೆಪ್ಟೆಂಬರ್ 12ರಂದು ಗದಗ ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಹಿರೇಮಲ್ಲಾಪುರ ಗ್ರಾಮದಲ್ಲಿ ರೈತರಿಂದ ಭೂಮಿ ಖರೀದಿಸಿ ಖಾಸಗಿ ಕಂಪನಿ ನಿರ್ಮಿಸುತ್ತಿರುವುದು ಸರಿಯಲ್ಲ. ಗ್ರಾಮೀಣ ಭಾಗದ ರೈತರಿಗೆ ತೊಂದರೆ ಕೊಡುವುದನ್ನು ನಾವು ಸಹಿಸುವುದಿಲ್ಲ ಅಂತ ಭಾಷಾಸಾಬ ಮಲ್ಲಸಮುದ್ರ ಹೇಳಿದರು.