ಜಿಲ್ಲೆಯ ಸ್ವಚ್ಛತೆಗೆ ಕೋಲಾರಮ್ಮ ಸ್ವಚ್ಛತಾ ಕಾರ್ಯಪಡೆ ಸಿದ್ಧವಾಗುತ್ತಿದೆ : ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಕೋಲಾರ ಜಿಲ್ಲೆಯಲ್ಲಿ ಉದ್ಯಾನವನಗಳ ಸ್ವಚ್ಛತೆ ಮಾಡುವ ನಿಟ್ಟಿನಲ್ಲಿ ನಮ್ಮ ಕೋಲಾರ ಜಿಲ್ಲೆಯಲ್ಲಿಯೇ ವಿಶೇಷವಾಗಿ ಒಂದು ತಂಡವನ್ನು ರಚನೆ ಮಾಡಿ ಎಲ್ಲಾ ಭಾಗಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡುವುದು ಮತ್ತು ಜೊತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಲು ಕೋಲಾರಮ್ಮ ಸ್ವಚ್ಛತಾ ಕಾರ್ಯ ಪಡೆ ಸಿದ್ಧವಾಗುತ್ತಿದೆ ಎಂದು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯ ನಗರಸಭೆ ಮತ್ತು ಪುರಸಭೆಯ ನಗರಗಳಲ್ಲಿನ ಉದ್ಯಾನವನಗಳ ಸ್ವಚ್ಛತೆ ಮತ್ತು ನೈರ್ಮಲ್ಯ ಟಾಸ್ಕ್ ಪೋರ್ಸ್ ರಚಿಸುವ ಬಗ್ಗೆ ಹಾಗೂ ಉದ್ಯಾನವನಗಳ ನಿರ್ವ