ಕರ್ನಾಟಕ ಬಾಲ ವಿಕಾಸ ಅಕಾಡಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು, ದೇಶದ ಕೀರ್ತಿ ಹೆಚ್ಚಿಸಿರುವ ಕ್ರೀಡಾಪಟುಗಳ ಆದರ್ಶಗಳನ್ನು ಯುವ ಕ್ರೀಡಾಪಟುಗಳು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮೇಜರ್ ಧ್ಯಾನಚಂದ್ ಜನ್ಮದಿನಾಚರಣೆ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಶಸ್ಸು ಕಾಣಲು ಸೋಲು ಗೆಲವುಗಳನ್ನು ಸಮಾನವಾಗಿ ಕಾಣುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ ಎಂದರು.