ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಮದ್ದೂರು ಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳ ಆಶ್ರಯದಲ್ಲಿ ಮದ್ದೂರು ಬಂದ್ ಮಾಡಲಾಯಿತು. ಮದ್ದೂರು ಪಟ್ಟಣದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಕರೆನೀಡಿದ್ದ ಬಂದ್ಗೆ ಮದ್ದೂರು ಪಟ್ಟಣ ಹಾಗೂ ಶಿವಪುರದ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ಗೊಳಿಸಿ ಪ್ರತಿಭಟನೆಗೆ ಸಹಕಾರ ನೀಡಿದರು. ಶ್ರೀಕ್ಷೇತ್ರ ಧರ್ಮಸ್ಥಳದ ವಿಚಾರದಲ್ಲಿ ಇಲ್ಲದ ಸಲ್ಲದ ಆರೋಪಗಳನ್ನು ಮಾಡುತ್ತಿರುವ ಎಂ.ಡಿ.ಶಮೀರ್, ಮಹೇಶ್ಶೆಟ್ಟಿ ತಿಮ್ಮರೋಡಿಗಿರೀಶ್ ಮಟ್ಟಣ್ಣ, ಲಾಯರ್ ಜಗದೀಶ್ ಕೂಡಲೇ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು. ಶ್ರೀನರಸಿಂಹಸ್ವಾಮಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ