ಹಳಿಯಾಳ : ತಾಲೂಕಿನ ಅವಗಿಯ ಶ್ರೀ ಪಾರ್ಶ್ವನಾಥ ದಿಗಂಬರ ಜೈನ ಬಸದಿಯಲ್ಲಿ ದಶಲಕ್ಷಣ ಪರ್ವ ಪೂಜಾ ಕಾರ್ಯಕ್ರಮವು ಶ್ರದ್ಧಾ ಭಕ್ತಿಯಿಂದ ನಡೆಯುತ್ತಿದೆ. ಶ್ರೀ ಪಾರ್ಶ್ವನಾಥ ದಿಗಂಬರ ಜೈನ ಬಸದಿಯ ಆಡಳಿತ ಸಮಿತಿಯ ಪದಾಧಿಕಾರಿಗಳ ಮತ್ತು ಸರ್ವ ಸದಸ್ಯರ ನೇತೃತ್ವ ಹಾಗೂ ಸಹಕಾರದಲ್ಲಿ ನಡೆಯುತ್ತಿರುವ ದಶಲಕ್ಷಣ ಪರ್ವ ಪೂಜಾ ಕಾರ್ಯಕ್ರಮದಲ್ಲಿ ಪ್ರತಿದಿನವೂ ಜೈನ ಧರ್ಮ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಇಂದು ಶನಿವಾರ ಸಂಜೆ 6 ಗಂಟೆಯಿಂದ ಪೂಜಾ ಕಾರ್ಯಕ್ರಮಗಳು ಆರಂಭಗೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜೈನ ಧರ್ಮ ಬಾಂಧವರು ಭಾಗವಹಿಸಿದ್ದರು.