ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಸರ್ಕಾರಿ ಜಾಗವನ್ನು ಅಧಿಕಾರಿಗಳಿಗೆ ಕಬಳಿಸಿ ಮಾರಾಟ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮಂಗಳವಾರ ಮಧ್ಯಾನ ಪುರಸಭೆಯ ಸದಸ್ಯರು ಆರೋಪ ಮಾಡಿ, ಸರ್ಕಾರಿ ಉದ್ಯಾನವನದ ಜಾಗವನ್ನು ಅಕ್ರಮವಾಗಿ ಕಬಳಿಸಿ ಸೈಟ್ ಮಾಡಿ ಮಾರಾಟ ಮಾಡುತ್ತಿರುವ ದಂದೆ ನಡೆದಿದೆ ಎಂದು ಹಾಗೂ ಖಾಸಗಿ ಲೇಔಟಗಳಲ್ಲಿನ ಉದ್ಯಾನವನಕ್ಕೆ ಮೀಸಲಿಟ್ಟ ಜಾಗವನ್ನು ಅಕ್ರಮವಾಗಿ ಖಾತಾ ನಕಲು ನೀಡಿ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇದರ ಕುರಿತು ತನಿಖೆ ನಡೆಸಿ ತಪ್ಪಿತಸ್ಥ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.