ಕರ್ನಾಟಕ ಲೋಕಸೇವಾ ಆಯೋಗವು 2024ರ ಮಾರ್ಚ್ 15 ರಂದು ಅಧಿಸೂಚಿಸಿರುವ ಪದವಿ ಮಟ್ಟದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿ-16 (ಹೈ.ಕ) ಹುದ್ದೆಗಳ ಪರೀಕ್ಷೆಯು ಸುರಕ್ಷಿತವಾಗಿ ನಡೆಯಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023ರ ಕಲಂ.163 ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಆದೇಶ ಹೊರಡಿಸಿದ್ದಾರೆ. ರಾಯಚೂರು ನಗರದ 07 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಸುತ್ತುವರೆದ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಈ ಪರೀಕ್ಷೆ ಕೇಂದ್ರಗಳ ಸುತ್ತಲಿನ ಎಲ್ಲಾ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಅಂಗಡಿಗಳನ್ನು ಹಾಗೂ ಸೈಬರ್ ಕಫೆಗಳನ್ನು ಪರೀಕ್ಷೆ ಸಮಯದಲ್ಲಿ ಕಡ್ಡಾಯವಾಗಿ