Download Now Banner

This browser does not support the video element.

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಕೆ.ಎನ್. ರಾಜಣ್ಣಗೆ ಸಚಿವ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Chiknayakanhalli, Tumakuru | Sep 8, 2025
ಚಿಕ್ಕನಾಯಕನಹಳ್ಳಿಯಲ್ಲಿ ಕಾಂಗ್ರೆಸ್ ನಿಷ್ಠಾವಂತ ನಾಯಕ ಕೆ.ಎನ್. ರಾಜಣ್ಣ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಸೋಮವಾರ ಮಧ್ಯಾಹ್ನ 3 ಗಂಟೆಯಲ್ಲಿ ಪ್ರತಿಭಟನೆ ಜರುಗಿತು. ಚಿಕ್ಕನಾಯಕನಹಳ್ಳಿ ತಾಲೂಕು ನೆಹರು ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಸಿಂಗದಳ್ಳಿ ರಾಜಕುಮಾರ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಮೆರವಣಿಗೆ ನಡೆಸಿ, ತಹಸೀಲ್ದಾರ್ ಪುರಂದರ್ ಅವರಿಗೆ ಮನವಿ ಸಲ್ಲಿಸಿದರು. ವಾಲ್ಮೀಕಿ ಸಂಘಟನೆ, ಹಿಂದುಳಿದ ವರ್ಗ ಸಂಘಟನೆಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿಕೊಂಡ ಈ ಪ್ರತಿಭಟನೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಣ್ಣನವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಬೇಕು ಎಂದು ಆಗ್ರಹಿಸಲಾಯಿತು.
Read More News
T & CPrivacy PolicyContact Us