ಸ್ಕೂಟಿಯಿಂದ ಬಿದ್ದು ಗಂಬೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬಂಕಾಪುರ ಪಟ್ಟಣದಲ್ಲಿ ನಡೆದಿದೆ. ಪ್ರಕಾಶ ಸಂಗಪ್ಪ ಬೆಂಚಹಳ್ಳಿ(60) ಮೃತನು. ತೀವ್ರವಾಗಿ ಗಾಯಗೊಂಡಿದ್ದ ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಗೆ ದಾಖಲು ಮಾಡಲಾಗಿತ್ತು. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.