ಶಿಡ್ಲಘಟ್ಟದಿಂದ ದಿಬ್ಬೂರಹಳ್ಳಿ ಮಾರ್ಗದ ರಸ್ತೆಯಲ್ಲಿರುವ ಬೈಯಪ್ಪನಹಳ್ಳಿ ಗೇಟ್ ಬಳಿ ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎಡಬದಿಯಲ್ಲಿ ಚಲಿಸುತ್ತಿದ್ದ ಬೈಕ್ ಸವಾರ ಮೇಲೆ ಕಾರ್ ಬಿದ್ದು ಕಾಲು ಮತ್ತು ಕೈ ನುಜ್ಜಾಗಿದೆ. ದಿಬ್ಬೂರಹಳ್ಳಿ ಪೋಲಿಸ್ ಠಾಣೆಯ ಸಿಬ್ಬಂದಿ ಬೈಕ್ ಸವಾರನನ್ನು ತಕ್ಷಣವೇ ಶಿಡ್ಲಘಟ್ಟ ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹೊಸಕೋಟೆಯ ಎಸ್ಎಂಆರ್ ಆಸ್ಪತ್ರೆಗೆ ದಾಖಲಿಸಲಾಯಿತು.