ಬಾಗೇಪಲ್ಲಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇನೆಯ ವತಿಯಿಂದ ರಾಜ್ಯಾಧ್ಯಕ್ಷ ಡಿ.ವಿ.ನಾರಾಯಣಸ್ವಾಮಿಯವರ ಅಧ್ಯಕ್ಷತೆಯಲ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಸಲಾಯಿತು. ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದ ರಾಜ್ಯಾದ್ಯಕ್ಷ ಡಿ.ವಿ.ನಾರಾಯಣ ಸ್ವಾಮಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಸರ್ವರಿಗೂ ಸಮಬಾಳು, ಸಮಪಾಲು ನೀಡುವ ಯೋಜನೆಗಳನ್ನು ಸಂಘಟನೆ ಹಾಕಿಕೊಂಡಿದ್ದು, ಸಾಮಾಜಿಕ ನ್ಯಾಯ ನೀಡಲು ರಾಜ್ಯಾದ್ಯಂತ ಶಾಖೆಗಳನ್ನು ಆರಂಭಿಸುವ ಮೂಲಕ ಸಂಘಟನೆಯ ಶಕ್ತಿ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.