ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನವಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಅವರನ್ನು ಆಗಸ್ಟ್ 28ರ ವರೆಗೆ ಜಾರಿ ನಿರ್ದೇಶನಾಲಯ (ಇ.ಡಿ) ಕಸ್ಟಡಿಗೆ ನೀಡಿ ಬೆಂಗಳೂರಿನ 35ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ.ಕ್ಯಾಸಿನೋವನ್ನ ಗುತ್ತಿಗೆಗೆ ನೀಡುವ ಕುರಿತ ಮಾತುಕತೆಗಾಗಿ ಗ್ಯಾಂಗ್‌ಟಕ್‌ಗೆ ತೆರಳಿದ್ದ ವೀರೇಂದ್ರ ಅವರನ್ನು ಶನಿವಾರವಷ್ಟೇ ಇಡಿ ಅಧಿಕಾರಿಗಳು ಬಂಧಿಸಿದ್ದರು. ಸ್ಥಳಿಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಟ್ರಾನ್ಸಿಟ್ ರಿಮಾಂಡ್ ಪಡೆದಿದ್ದ ಇ.ಡಿ ಅಧಿಕಾರಿಗಳು ತಡರಾತ್ರಿ ವೀರೇಂದ್ರ ಅವರನ್ನು ಬೆಂಗಳೂರಿಗೆ ಕರೆತಂದಿದ್ದರು. ಬಳಿಕ 35ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್ ಅವರ ಕೋರಮಂಗಲದ ನಿವಾಸ