ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವನಪ್ಪಿರುವ ಘಟನೆ ಭಾನುವಾರ ಸಾಯಂಕಾಲ ನಡೆದಿದೆ. 26 ವರ್ಷದ ಭವಾನಿ ನಾಗರಾಜ ನಾಯಕ ಎಂಬ ಮಹಿಳೆಯು ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದಿದ್ದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ. ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ಮಹಿಳೆಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದ ನೂರಾರು ಜನರು ಆಗಮಿಸಿ ಘಟನೆಯನ್ನು ಕಂಡು ಬೇಸರ ವ್ಯಕ್ತಪಡಿಸಿದ್ದಾರೆ.