ಪ್ರಪಂಚದಾದ್ಯಂತ ಮುಸ್ಲಿಮರು ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಈದ್-ಎ-ಮಿಲಾದ್ ಎಂದು ಆಚರಿಸುತ್ತಾರೆ. ಈ ದಿನವನ್ನು ನಬಿದ್, ಮೌಲಿದ್ ಅಥವಾ ಮೌಲಿದ್ ಆನ್-ನಬಿ ಎಂದು ಕರೆಯಲಾಗುತ್ತದೆ. ಪಟ್ಟಣದಲ್ಲಿ ಶುಕ್ರವಾರ ಬೆಳಿಗ್ಗಿನಿಅಮದಲು ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರಿಂದ ಮೆರವಣಿಗೆ ನಡೆದ ಹಿನ್ನೆಲೆ ಬೂದಿಕೋಟೆ ರಸ್ತೆಯಿಂದ ಅಂಬೇಡ್ಕರ್ ಪುತ್ತಳಿ ಬಳಿಯವರೆಗೂ ಸಂಚಾರ ಸ್ಥಗಿತಗೊಂಡಿತ್ತು. ಕಳೆದ ವರ್ಷಕ್ಕಿಂತ ಈ ವರ್ಷ ವಿಜೃಂಭಣೆಯಿಂದ ಆಚರಣೆ ಮಾಡಿದರು.