ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಚಾಮುಂಡೇಶ್ವರಿ ಸನ್ನಿಧಿಗೆ ಸಾವಿರಾರು ಭಕ್ತರ ದಂಡೆ ಹರಿದು ಬಂದಿತ್ತು. ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆಯ ಚಾಮುಂಡೇಶ್ವರಿ ಸನ್ನಿಧಿಗೆ ಬುಧವಾರ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ತಾಯಿ ಚಾಮುಂಡೇಶ್ವರಿಯ ಆಶಿರ್ವಾದ ಪಡೆದರು. ಅತಿ ಎತ್ತರದ ಚಾಮುಂಡೇಶ್ವರಿ ಪಂಚ ಲೋಹದ ವಿಗ್ರಹ ದರ್ಶನ ಮಾಡಿ ಪುನಿತರಾದರು.