ಚಿಕ್ಕಬಳ್ಳಾಪುರ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ದಾಟುವ ವಿಚಾರವಾಗಿ ವಾಹನ ಸವಾರ ಮತ್ತು ಟ್ರಾಫಿಕ್ ಪೊಲೀಸರ ನಡುವೆ ಗಲಾಟೆ ನಡೆದು ಪರಸ್ಪರ ತಳ್ಳಾಟ ನಡೆದಿದೆ. ನಗರದ ನಿವಾಸಿ ವರದಾರವರು ತಮ್ಮ ಬೈಕಿನಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್ ಗಳು ಬೆಳಗದ ಹಿನ್ನೆಲೆಯಲ್ಲಿ ನಗರದ ಶಿಡ್ಲಘಟ್ಟ ಆ ವೃತ್ತವನ್ನು ದಾಟಿ ಹೋಗಿದ್ದಾರೆ. ಇದನ್ನು ಗಮನಿಸಿದ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಬಸಪ್ಪ ಲಂಬಾಣಿಯವರು ಅವರನ್ನು ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿ ಪರಿಣಮಿಸಿದೆ. ನಂತರ ಸ್ಥಳೀಯರು ಮತ್ತು ಮತ್ತಷ್ಟು ಪೊಲೀಸರು ಸ್ಥಳಕ್ಕೆ ಆಗಮಿಸಿ ಗಲಾಟೆಯನ್ನು ಬಿಡಿಸಿದ್ದಾರೆ.