ಪ್ರತಿ ವರ್ಷದಂತೆ ಈ ವರ್ಷವೂ ಹಳೆ ಅಡಪ್ ಬಜಾರ್ ನಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲ್ಪಡುವ ಭವಾನಿ ಉತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜೈ ಭವಾನಿ ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷ ಬಾಬುರಾವ್ ಪೋಚಂಪಳ್ಳಿ ತಿಳಿಸಿದರು. ಉತ್ಸವ ನಿಮಿತ್ತ ಶನಿವಾರ ರಾತ್ರಿ 8:45ಕ್ಕೆ ನಡೆದ ಪೂರ್ವಭಾವಿ ಸಭೆಯಲ್ಲಿ ಭವಾನಿ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದರು. ಸಮಿತಿ ಸಮಸ್ತ ಪದಾಧಿಕಾರಿಗಳಿದ್ದರು.