ಕೊಪ್ಪಳ ತಾಲೂಕ ಪಂಚಾಯತ್ ಕಾರ್ಯಾಲಯದಲ್ಲಿ 2025-26ನೇ ಸಾಲಿನ ಮೊದಲನೇ ತ್ರೈಮಾಸಿಕ ಸಭೆಯ ನಡೆಯಿತು. ಆಗಸ್ಟ್ 25 ರಂದು ಮಧ್ಯಾಹ್ನ 2-00 ಗಂಟೆಗೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನೇತೃತ್ವದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಇಲಾಖೆಗಳ ಪ್ರಗತಿ ಪರಿಶೀಲನಾ ನಡೆಸಿದರು. ವಿವಿಧ ಇಲಾಖೆಗಳ ಅಡಿಯಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಸುಧೀರ್ಘ ಕಾಲ ಚರ್ಚೆ ನಡೆಸಿದರು ಸಭೆಯಲ್ಲಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಾಲಚಂದ್ರನ್ ಮುನಿರಬಾದ್, ಉಪ ವಿಭಾಗಧಿಕಾರಿ ಮಹೇಶ್ ಮಾಲಗಿತ್ತಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ್ ವಡ್ಡರ್, ಉಪಸ್ಥಿತರಿದ್ದರು