ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸೇವಾ ಪ್ರಾಕ್ಷೀಕ್ಷ ಕಾರ್ಯಕ್ರಮವನ್ನು ಗುರುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಮಾಜಿ ಶಾಸಕ ರಮೇಶ್ ಬೂಸನೂರ್ ಉದ್ಘಾಟಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ ಬಿಜೆಪಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳನ್ನು ಜನರಿಗೆ ಮಾಹಿತಿ ನೀಡುವಂತಹ ಕೆಲಸ ಮಾಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಿಂದಗಿ ತಾಲೂಕು ಮಂಡಳಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.