ಧಾರವಾಡ ನಗರದ ಸಾರ್ವಜನಿಕ ಗಣೇಶೋತ್ಸವ ಮಂಡಳಿಯ ಗಣಪತಿ ಮಂಟಪಗಳಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ಗಣೇಶೋತ್ಸವ ಸಂಭ್ರಮದಲ್ಲಿ ಭಾಗವಹಿಸಿದರು. ಭಾನುವಾರ ರಾತ್ರಿ 8 ಗಂಟೆಗೆ ನಗರದ ಟಿಕಾರೆ ರಸ್ತೆ, ಅಕ್ಕಿಪೇಟೆ, ಸುಭಾಷ್ ರಸ್ತೆ, ಗಾಂಧಿ ಚೌಕ್ ಸೇರಿದಂತೆ ವಿವಿಧ ಕಡೆಗಳಲ್ಲಿ ಗಣಪತಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಮಹಾಪೌರರಾದ ಜ್ಯೋತಿ ಪಾಟೀಲ ಇದ್ದರು.