ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ಅವರು ತಿಳಿಸಿದರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಗಳಾದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ವಿಶ್ವಕರ್ಮ ಜಯಂತಿಗಳ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.