ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದ ಉಜ್ಜನಿ, ವೀರ್ ಜಲಾಶಯಗಳಿಂದ ಭೀಮಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಘತ್ತರಗಿ, ತೆಲ್ಲೂರ್, ದೇವಲಗಾಣಗಾಪುರ, ಮಣ್ಣೂರು, ಬಂಕಲಗಾ ಸೇರಿ 94 ಹಳ್ಳಿಗಳ ನೂರಾರು ರೈತರ ಸಾವಿರಾರು ಎಕರೆ ಜಮೀನು ಜಲಾವೃತಗೊಂಡು ತೊಗರಿ, ಉದ್ದು, ಹೆಸರು, ಸೋಯಾ, ಹತ್ತಿ ಸೇರಿದಂತೆ ಮುಂಗಾರು ಬೆಳೆಗಳು ಸಂಪೂರ್ಣ ನಾಶವಾಗಿವೆ. ಸಾಲ ಮಾಡಿ ಕೃಷಿ ಮಾಡಿದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತಕ್ಷಣ ಸೂಕ್ತ ಪರಿಹಾರ ಘೋಷಿಸಬೇಕೆಂದು ಗುರುವಾರ 5 ಗಂಟೆಗೆ ಆಗ್ರಹ ವ್ಯಕ್ತಪಡಿಸಿದ್ದಾರೆ.