ಸುರಪುರ ನಗರದ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿ ಹಾಕಲಾಗಿರುವ ಧ್ವಜಗಳನ್ನು ತೆರೆವುಗೊಳಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶ್ರೀ ಪ್ರಭು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಉಪನ್ಯಾಸಕರು ಹಾಗೂ 500ಕ್ಕೂ ಹೆಚ್ಚು ಜನ ವಿದ್ಯಾರ್ಥಿಗಳು ಭಾಗವಹಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಾಲೇಜಿನಿಂದ ನಗರದ ಪ್ರಮುಖ ಬೀದಿಗಳ ಮೂಲಕ ಮಹಾತ್ಮ ಗಾಂಧಿ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಬಹಿರಂಗ ಸಮಾವೇಶ ನಡೆಸಿ ಧ್ವಜಗಳ ತೆರವುಗೊಳಿಸುವಂತೆ ಆ ಗ್ರಹಿಸಿ ರಾಜ್ಯಪಾಲರಿಗೆ ಬರೆದ ಮನವಿ ತಹಸಿಲ್ದಾರರ ಮೂಲಕ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ವಿದ್ಯಾರ್ಥಿಗಳು ಸೇರಿದಂತೆ ಅನೇಕ ಜನ ಸಾರ್ವಜನಿಕರು ಭಾಗವಹಿಸಿದ್ದರು.