ದಾಂಡೇಲಿ : ಇಡೀ ಊರಿನ ಶಾಂತಿಯ ಸುವ್ಯವಸ್ಥೆಯನ್ನು ಕಾಪಾಡಲು ಎದೆಯೊಡ್ಡಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಕೆಲಸದ ಒತ್ತಡದ ನಡುವೆಯೂ ಪ್ರತಿವರ್ಷದಂತೆ ಈ ವರ್ಷವೂ ನಗರ ಠಾಣೆಯ ಆವರಣದಲ್ಲಿ ಶ್ರೀ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಆರಾಧಿಸುತ್ತಿದ್ದಾರೆ. ಒಂದು ಕಡೆ ಇಡೀ ದಾಂಡೇಲಿ ನಗರದ ಸಾರ್ವಜನಿಕ ಗಣೇಶೋತ್ಸವ ಶಾಂತಿಯುತವಾಗಿ ನಡೆಯುವಂತಾಗಲು ತಮ್ಮನ್ನು ತಾವು ಪ್ರಾಮಾಣಿಕವಾಗಿ ತೊಡಗಿಸಿಕೊಂಡಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರೀ ಗಣೇಶನನ್ನು ಅತ್ಯಂತ ಭಕ್ತಿ ಪ್ರಧಾನವಾಗಿ ಹಾಗೂ ಶಿಸ್ತು ಬದ್ಧವಾಗಿ ಪ್ರತಿಷ್ಠಾಪಿಸಿ ಆರಾಧಿಸುವ ಸಂಪ್ರದಾಯವನ್ನು ಕಳೆದ ಅನೇಕ ವರ್ಷಗಳಿಂದ ಮುಂದುವರಿಸಿಕೊಂಡು ಬಂದಿದ್ದಾರೆ.