ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪ್ರವಾಸಿ ಹೊಂದಿರಲಿ ಮಂಗಳವಾರ ಮಧ್ಯಾನ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಅವರು ತಾಲೂಕ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಮಾನ್ವಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗಳ ಗುಣಮಟ್ಟದ ನಿರ್ವಹಣೆಯನ್ನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಶಾಸಕ ಜಿ ಹಂಪಯ್ಯ ನಾಯಕ ,ತಹಸಿಲ್ದಾರ್ ಭೀಮರಾಯ ರಾಮಸಮುದ್ರ, ತಾಲೂಕ ಪಂಚಾಯತ್ ಕಾರ್ಯನಿರ್ವಕ ಅಧಿಕಾರಿ ಖಾಲಿದ್ ಅಹಮದ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.