ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಕೋಲಾರ ನಗರಸಭೆ ವತಿಯಿಂದ ಪೌರ ಕಾರ್ಮಿಕರಿಗೆ ಬುಧವಾರ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರಿಕೆಟ್ ಬ್ಯಾಟಿಂಗ್ ಮಾಡುವ ಮೂಲಕ ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ ರಮೇಶ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ವರ್ಷದ ಎಲ್ಲಾ ದಿನಗಳಲ್ಲಿಯೂ ಪೌರ ಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ನಗರದ ಸುಂದರೀಕರಣಕ್ಕೆ ಹಗಲಿರುಳು ಎನ್ನದೆ ದುಡಿಯುತ್ತಿರುವುದು ಶ್ಲಾಘನೀಯ ಎಂದರು. ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ವಿವಿಧ ಕ್ರೀಡೆಗಳನ್ನು ನಡೆಸಲಾಗುತ್ತಿದೆ. ಕ್ರೀಡೆಗಳಲ್ಲಿ ವಿಜೇತರಾದವರಿಗೆ ಸೆಪ್ಟೆಂಬರ್ 23ರಂದು ನಡೆಯುವ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದರು.